ಬೆಂಗಳೂರು: ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿತ ಉಗ್ರನೊಬ್ಬನನ್ನು ಅಸ್ಸಾಂನ ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ.
ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನೆಲೆಸಿದ್ದ ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಗಿರೀಶ್ ಬೋರಾ ಅಲಿಯಾಸ್ ಗೌತಮ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಆಗಸ್ಟ್ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದನು.
ಜಿಗಣಿಯ ಖಾಸಗಿ ಕಂಪನಿಯೊಂದರಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಗಿರೀಶ್ ಬೋರಾ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದನು. ಗಿರೀಶ್ ಬೋರಾನ ಬಗ್ಗೆ ಪಕ್ಕಾ ಮಾಹಿತಿ ಕಲೆಹಾಕಿದ್ದು ಅಸ್ಸಾಂ ಎನ್ಐಎ ತಂದ ಇದೀಗ ಶಂಕಿತ ಉಗ್ರನನ್ನು ಬಂಧಿಸಿದೆ.