ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಅಜಯ್‌ ಸೇಠ್‌ ನೇಮಕ

Prasthutha|

ಹೊಸದಿಲ್ಲಿ : ಹಣಕಾಸು ಸಚಿವಾಲಯದ ಹೊಸ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಅಜಯ್ ಸೇಠ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ. ಕರ್ನಾಟಕ ಕೇಡರ್‌ ನ 1987ನೇ ತಂಡದ ಭಾರತೀಯ ನಾಗರಿಕ ಸೇವಾ ಅಧಿಕಾರಿಯಾಗಿರುವ ಸೇಠ್, ಪ್ರಸ್ತುತ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಆರ್ ಎಂಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಸೂಚನೆಯ ಪ್ರಕಾರ, ಸಂಪುಟದ ನೇಮಕಾತಿ ಸಮಿತಿಯು (ಎಸಿಸಿ) ಪ್ರಸ್ತುತ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ತರುಣ್ ಬಜಾಜ್ ಅವರನ್ನ ಕಂದಾಯ ಇಲಾಖೆಗೆ ಸ್ಥಳಾಂತರಿಸಲು ಅನುಮೋದನೆ ನೀಡಿದೆ.

ಅಜಯ್ ಭೂಷಣ್ ಪಾಂಡೆ ಫೆಬ್ರವರಿಯಲ್ಲಿ ನಿವೃತ್ತರಾದ ನಂತರ ಬಜಾಜ್ ಕಂದಾಯ ಇಲಾಖೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

- Advertisement -

ಇಂಧನ ಸಚಿವಾಲಯದ ಸೌರ ಶಕ್ತಿ ನಿಗಮ ಲಿಮಿಟೆಡ್ʼನ ವ್ಯವಸ್ಥಾಪಕ ನಿರ್ದೇಶಕ ಜತಿಂದ್ರ ನಾಥ್ ಸ್ವೈನ್ ಅವರನ್ನ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ರಕ್ಷಣಾ ಸಚಿವಾಲಯದ ರಕ್ಷಣಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜೀವೇಶ್ ನಂದನ್ ಅವರನ್ನ ರಕ್ಷಣಾ ಸಚಿವಾಲಯದ ರಕ್ಷಣಾ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಜ್ಞಾನೇಶ್ ಕುಮಾರ್ ಅವರನ್ನ ಸಂಸದೀಯ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ವಿಶೇಷ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಅಲಿ ರಝಾ ರಿಝ್ವಿ ಅವರನ್ನು ಸಾರ್ವಜನಿಕ ಉದ್ಯಮಗಳ ಇಲಾಖೆ, ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವಾಲಯದ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.



Join Whatsapp