ಯೂಟ್ಯೂಬರ್ ಎಲ್ವಿಶ್ ಯಾದವ್ ಗೆ ಸೇರಿದ 52 ಲಕ್ಷ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

Prasthutha|

ಲಖನೌ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಿದ್ಧಾರ್ಥ್ ಯಾದವ್ ಅಲಿಯಾಸ್ ಎಲ್ವಿಶ್ ಯಾದವ್ ಹಾಗೂ ಇತರರಿಗೆ ಸೇರಿದ ₹52.49 ಲಕ್ಷ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತಿಳಿಸಿದ್ದಾರೆ.

- Advertisement -


ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿರುವ ಕೃಷಿ ಭೂಮಿ, ಹರಿಯಾಣದ ಮೂಲದ ಗಾಯಕ ರಾಹುಲ್ ಯಾದವ್ ಅಲಿಯಾಸ್ ರಾಹುಲ್ ಫಝಿಲ್ ಪುರಿಯಗೆ ಸೇರಿದ ಬ್ಯಾಂಕ್ ಖಾತೆಗಳು ಹಾಗೂ ಸ್ಕೈ ಡಿಜಿಟಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಈಚೆಗೆ ಪಾರ್ಟಿಗಳಲ್ಲಿ ಹಾವಿನ ವಿಷ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಇ.ಡಿಯು ಎಲ್ವಿಶ್ ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು.

- Advertisement -


ಎಲ್ವಿಶ್ ಯಾದವ್ ಮತ್ತು ಅವರ ಇತರ 6 ಜನರ ವಿರುದ್ಧ ಉತ್ತರಪ್ರದೇಶದ ಗೌತಮ ಬುದ್ಧ ನಗರ ಜಿಲ್ಲೆಯ ಪೊಲೀಸರು ಕಳೆದ ವರ್ಷ ನವೆಂಬರ್ 3ರಂದು ಎಫ್ ಐಆರ್ ದಾಖಲಿಸಿ, ಬಳಿಕ 1200 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ಸಂಬಂಧ ಇ.ಡಿಯು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ದೂರು ದಾಖಲಿಸಿಕೊಂಡಿತ್ತು.



Join Whatsapp