ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ SIT ದಾಳಿ

Prasthutha|

ಬೆಂಗಳೂರು: ಅತ್ಯಾಚಾರ, ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು.

- Advertisement -

ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದೆ.

ಸದ್ಯ ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಫ್​ಎಸ್​​ಎಲ್ ತಂಡದ ಜತೆಗೇ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



Join Whatsapp