ನಾಗಮಂಗಲ ಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು

Prasthutha|

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ನಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

- Advertisement -

ಸೆಪ್ಟೆಂಬರ್ 11ರಂದು ಆರೋಪಿಗಳನ್ನು ಬಂಧಿಸಲಾಗಿತ್ತು.

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು.

- Advertisement -

ಸದ್ಯ ನಾಗಮಂಗಲ ಪಟ್ಟಣ ಇದೀಗ ಸಹಜಸ್ಥಿತಿಗೆ ಮರಳಿದೆ. ಎಂದಿನಂತೆ ವ್ಯಾಪಾರ, ವಹಿವಾಟು ನಡೆಯುತ್ತಿವೆ. ಆದರೆ ಗಲಾಟೆಯಲ್ಲಿ ಕೆಲವು ಅಮಾಯಕರ ಬಂಧನವಾಗಿದ್ದು, ಸದ್ಯ ಅವರಿಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.



Join Whatsapp