ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ: ಕೆಲವರಿಗೆ ಗಾಯ

Prasthutha|

ಚೆನ್ನೈ: ಟಾಟಾ ಕಂಪನಿಯ ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕಾ ಘಟಕದ ರಾಸಾಯನಿಕ ಗೋದಾಮಿನಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿ ಹಲವರಿಗೆ ಗಾಯಗಳಾಗಿರುವ ಘಟನೆ ತಮಿಳುನಾಡಿನ ಹೊಸೂರಿನಲ್ಲಿ ನಡೆದಿದೆ.

- Advertisement -


ಹೊಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಹಲವು ಗಂಟೆಗಳ ಪರಿಶ್ರಮದ ನಂತರ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.


‘ಘಟಕದ ರಾಸಾಯನಿಕ ಗೋದಾಮಿನಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಗೆ ಈ ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳಕ್ಕೆ ಸೇರಿದ ಏಳು ತುಕಡಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಪಾಲ್ಗೊಂಡವು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದು ಹೊಸೂರು ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp