ಚುನಾವಣಾ ಬಾಂಡ್ ಅಕ್ರಮ: ನಿರ್ಮಲಾ, ನಳಿನ್, ವಿಜಯೇಂದ್ರ ಸೇರಿ ಹಲವರ ವಿರುದ್ಧ FIR

Prasthutha|

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

- Advertisement -


ಇವರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಎಫ್ ಐಆರ್ ದಾಖಲಾಗಿದೆ.


ನಿರ್ಮಲಾ ಸೀತಾರಾಮನ್ ಮತ್ತು ಇತರರು ಚುನಾವಣಾ ಬಾಂಡ್ಗಳ ಸೋಗಿನಲ್ಲಿ ಸುಲಿಗೆ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಸಂಘಟನೆಯ (JSP) ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.

- Advertisement -


ಎ1 ಆರೋಪಿ: ಒಟ್ಟು ಐವರ ಮೇಲೆ ಎಫ್ ಐಆರ್ ದಾಖಲಾಗಿದ್ದು, ನಿರ್ಮಲಾ ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.


ಐಪಿಸಿ ಸೆಕ್ಷನ್ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್ ದಾಖಲಾಗಿದೆ.


ಈಗ ರದ್ದಾದ ಚುನಾವಣಾ ಬಾಂಡ್ ಗಳ ಮೂಲಕ ಹಣ ವಸೂಲಿ ಮಾಡಿದ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರ ನಾಯಕರ ವಿರುದ್ಧ ಎಫ್ ಐಆರ್ ದಾಖಲಿಸಲು ಬೆಂಗಳೂರು ನ್ಯಾಯಾಲಯ ಆದೇಶಿಸಿತ್ತು.



Join Whatsapp