ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ: ಪ್ರದೀಪ್ ಈಶ್ವರ್

Prasthutha|

ಚಿಕ್ಕಬಳ್ಳಾಪುರ: ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

- Advertisement -

ಸಿಎಂ ಸಿದ್ದರಾಯಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ ವಿಚಾರಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರದಲ್ಲಿ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ. ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿಗಳು. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದರು.

- Advertisement -

ಬಿಜೆಪಿಯವರು ಹೋರಾಟ ಮಾಡಬೇಕು. ಹಾಗಾಗಿ ಹೋರಾಟ ಮಾಡಲಿ. ಆದರೆ, ಕುಮಾರಸ್ವಾಮಿ, ಯಡಿಯೂರಪ್ಪನವರ ಮೇಲೆ ಎಫ್‌ ಐಆರ್ ಆಗಿಲ್ವಾ? ಬೇಲ್ ಮೇಲೆ ಹೊರಗಿಲ್ವಾ? ವಿಜಯೇಂದ್ರ ಮೇಲೆ ಇಲ್ವಾ? ಅವರು ಮೊದಲು ರಾಜೀನಾಮೆ ಕೊಟ್ಟು ಮೇಲ್ಪಂಕ್ತಿ ಹಾಕಿಕೊಡಲಿ. ಅವರಿಗೊಂದು ನ್ಯಾಯ ನಮಗೊಂದು ನ್ಯಾಯನಾ ಎಂದು ಪ್ರಶ್ನಿಸಿದರು.



Join Whatsapp