ಮಂಡ್ಯ | ಕಂಟೈನರ್’ಗೆ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

Prasthutha|

ಮಂಡ್ಯ: ನಿಂತಿದ್ದ ಕಂಟೈನರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಾಂಜೋ ಆಸ್ಪತ್ರೆ ಬಳಿ ನಡೆದಿದೆ.

- Advertisement -


ಬೆಂಗಳೂರು-ಮೈಸೂರು ದಶಪತ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು, ಬೆಂಗಳೂರು ಕಡೆಯಿಂದ ಮಂಡ್ಯಕ್ಕೆ ತೆರಳುತ್ತಿದ್ದ ಬಸ್ ಎಕ್ಸ್ ಪ್ರೆಸ್ ವೇ ನಿಂದ ಸರ್ವಿಸ್ ರಸ್ತೆಗೆ ಬರುತ್ತಿದ್ದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿ ಹೊಡೆದಿದೆ


ಅಪಘಾತದ ವೇಳೆ ಬಸ್ ನಲ್ಲಿ 80ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದು, ಕಾಲೇಜು ವಿದ್ಯಾರ್ಥಿಗಳೇ ಹೆಚ್ಚು ಪ್ರಯಾಣ ಮಾಡುತ್ತಿದ್ದರು. 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದು, 30ಕ್ಕೂ ಹೆಚ್ಚು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.



Join Whatsapp