ದೆಹಲಿ: ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ದಾಖಲಾಗಿರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳ ಕುರಿತು ತಮಿಳುನಾಡು ಪೊಲೀಸರಿಂದ ವರದಿ ಕೇಳಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಗುರುವಾರ ತಡೆ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನಾವು ಹೈಕೋರ್ಟ್ ಆದೇಶಕ್ಕೆ ತಡೆ ನೀಡುತ್ತೇವೆ, ಹೈಕೋರ್ಟ್ ಯಾವುದೇ ಪ್ರಾಥಮಿಕ ಕಾರಣವಿಲ್ಲದೆ ಆದೇಶ ನೀಡಿದೆ ಎಂದು ಹೇಳಿದ್ದಾರೆ.
ಪ್ರತಿಷ್ಠಾನದ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಸುಪ್ರೀಂಕೋರ್ಟ್ ನಿಂದ ತುರ್ತು ವಿಚಾರಣೆಯನ್ನು ಕೋರಿದ್ದು ಕೇಂದ್ರವು ಅದರ ಪರವಾಗಿ ಪ್ರತಿಕ್ರಿಯಿಸಿದೆ. ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು “ಹೈಕೋರ್ಟ್ ತುಂಬಾ ಜಾಗರೂಕರಾಗಿರಬೇಕು” ಎಂದು ಹೇಳಿದರು.