ಚಮಚಾಗಿರಿ ಭಾಷಣದಿಂದ ನಾಡಹಬ್ಬದ ಪಾವಿತ್ರ್ಯ ಹಾಳಾಗಿದೆ: ವಿಶ್ವನಾಥ್

Prasthutha|

ಮೈಸೂರು: ‘ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆಯು ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಹಾಳಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಆರೋಪಿಸಿದರು.

- Advertisement -


ನಗರದಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ವಿಶ್ವನಾಥ್, ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಡೆದ ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದ ಪಾವಿತ್ರ್ಯತೆಯು ಚಮಚಾಗಿರಿಯ ಭಾಷಣ ಹಾಗೂ ರಾಜಕಾರಣದ ಘಮಲಿನಿಂದಾಗಿ ಹಾಳಾಗಿದೆ. ಆ ಕಾರ್ಯಕ್ರಮದಲ್ಲಿ ರಾಜಕೀಯ ಮಾತನಾಡುವುದು ಬೇಕಿರಲಿಲ್ಲ. ಈ ಹಿಂದೆ ಚಾಮುಂಡೇಶ್ವರಿಯ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದ ಸಿದ್ದರಾಮಯ್ಯ ಈಗ ಪದೇ ಪದೇ ಆ ತಾಯಿಯ ಆಶೀರ್ವಾದ ಬೇಡಿದ್ದಾರೆ. ನಾನೇನೂ ತಪ್ಪು ಮಾಡಿಲ್ಲ ಎಂದು ಪುನರುಚ್ಚರಿಸುತ್ತಿದ್ದಾರೆ. ಇದರ ಅರ್ಥವೇನು ಎಂದು ಪ್ರಶ್ನಿಸಿದ್ದಾರೆ.

ದಸರಾ ಉದ್ಘಾಟಿಸಿದ ಸಾಹಿತಿ ಹಂ.ಪ. ನಾಗರಾಜಯ್ಯ ಅವರೂ ರಾಜಕೀಯ ಭಾಷಣ ಮಾಡಿದ್ದಾರೆ. ಭಕ್ತಿ ಭಾವದ ಕಾರ್ಯಕ್ರಮದಲ್ಲಿ ದಸರಾ ಇತಿಹಾಸ, ಮಹಾರಾಜರ ಕೊಡುಗೆ, ನಾಡಹಬ್ಬದ ಐತಿಹಾಸಿಕ ಮಹತ್ವದ ಬಗ್ಗೆ ಮಾತನಾಡದೇ, ಕೆಳಮಟ್ಟಕ್ಕೆ ತರುವ ಕೆಲಸವನ್ನು ನಮ್ಮ ರಾಜಕಾರಣಿಗಳು ಮಾಡಿದ್ದಾರೆ. ಜಿಟಿ ದೇವೇಗೌಡ ಸಿದ್ದರಾಮಯ್ಯರನ್ನು ಹೊಗಳಿರುವುದು ಬೂಟಾಟಿಕೆ ಎನಿಸಿತು. ಅವರೂ ಕೂಡ ಮುಡಾ ಫಲಾನುಭವಿಯೇ. ಅಷ್ಟೆಲ್ಲ ಹೊಗಳುವ ಅವಶ್ಯಕತೆ ಇರಲಿಲ್ಲ. ಇಡೀ ಕಾರ್ಯಕ್ರಮವನ್ನು ಅವರು ಗೊಂದಲಮಯ ಮಾಡಿ, ಹೊಲಸಾಗಿದರು. ಅದಕ್ಕೆ ಕ್ಷಮೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.



Join Whatsapp