ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ 2024-2025ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ನೋಟಿಫಿಕೇಶನ್ ಹೊರಡಿಸಲಾಗಿದೆ. ಆಸಕ್ತರು ನಿಗದಿತ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಹತೆಗಳು
ಅಭ್ಯರ್ಥಿಗಳು ಆಸಕ್ತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಪಿ.ಹೆಚ್.ಡಿ/ಎನ್.ಇ.ಟಿ./ ಎಸ್.ಎಲ್.ಇ.ಟಿ. ಹೊಂದಿರಬೇಕಾಗುತ್ತದೆ.
ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್ಸೈಟ್ನಿಂದ www.bnu.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ತಮ್ಮ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸೇವಾನುಭವ ಪತ್ರ, ಪಿ.ಹೆಚ್.ಡಿ/ಎನ್.ಇ.ಟಿ./ಎಸ್.ಎಲ್.ಇ.ಟಿ. ಪ್ರಮಾಣಪತ್ರ, ಸಂಶೋಧನ ಪ್ರಕಟಣೆಗಳ ಪತ್ರಿಕೆಗಳು ಇತ್ಯಾದಿ ಅಗತ್ಯ ದಾಖಲಾತಿಗಳೊಂದಿಗೆ (ದ್ವಿಪ್ರತಿಗಳಲ್ಲಿ) ಕೆಳಗಿನ ವಿಳಾಸಕ್ಕೆ ಸಲ್ಲಿಸುವುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ : ಕುಲಸಚಿವರು, ವಿಶ್ವವಿದ್ಯಾಲಯದ ಆಡಳಿತ ಕಛೇರಿ, ಶ್ರೀ ದೇವರಾಜ ಅರಸು ಬಡಾವಣೆ, ಟಮಕ, ಕೋಲಾರ.- 563103.
ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ: 28-09-2024.
ಅರ್ಜಿಗಳನ್ನು ಸಲ್ಲಿಸಲು ಅಂತಿಮ ದಿನಾಂಕ: 07-10-2024 ರ ಸಂಜೆ: 5.30 ಗಂಟೆಯ ಒಳಗೆ.