ದ.ಕ. ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ

Prasthutha|

- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಂಜೆ ಹೊತ್ತಿಗೆ ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆಯಾಗಿದೆ.

ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಿದೆ.

- Advertisement -

ಮಂಗಳೂರು ನಗರದಲ್ಲಿ ಸಿಡಿಲಿನ ಅಬ್ಬರ ಜೋರಾಗಿತ್ತು. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆ ಹೊತ್ತಿಗೆ ಭಾರೀ ಮಳೆ ಸುರಿದಿದೆ.

ಮುಂದಿನ‌‌ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.



Join Whatsapp