ದೇಶದ ಪ್ರಮುಖ ನಗರಗಳಲ್ಲಿ ಇನ್ ಸ್ಟಾಗ್ರಾಂ ಡೌನ್: ಮೆಟಾ ವಿರುದ್ಧ ಆಕ್ರೋಶ

Prasthutha|

ನವದೆಹಲಿ: ಮೆಟಾ ಒಡೆತನದ ಜನಪ್ರಿಯ ಸಾಮಾಜಿಕ ಮಾಧ್ಯಮ ಇನ್ ಸ್ಟಾಗ್ರಾಂ ಸೇವೆಯಲ್ಲಿ ಮಂಗಳವಾರ ವ್ಯತ್ಯಯ ಉಂಟಾಗಿದೆ.

- Advertisement -


ಶೇ 64ರಷ್ಟು ಬಳಕೆದಾರರಿಗೆ ಲಾಗ್ ಇನ್ ಮಾಡುವಲ್ಲಿ ಸಮಸ್ಯೆ ಕಾಣಿಸಿಕೊಂಡರೆ, ಶೇ 24ರಷ್ಟು ಬಳಕೆದಾರರಿಗೆ ಸರ್ವರ್ ಸಂಪರ್ಕದಲ್ಲಿಯೇ ಸಮಸ್ಯೆ ಕಾಣಿಸಿಕೊಂಡಿದೆ.


ದೆಹಲಿ, ಜೈಪುರ, ಲಖನೌ, ಮುಂಬೈ, ಅಹಮದಾಬಾದ್, ಕೋಲ್ಕತ್ತ, ಹೈದರಾಬಾದ್, ಬೆಂಗಳೂರು, ಚೆನ್ನೈ ಸೇರಿದಂತೆ ಹಲವು ನಗರಗಳಲ್ಲಿ ಅಡಚಣೆ ಉಂಟಾಗಿದೆ ಎಂದು ತಿಳಿದುಬಂದಿದೆ.

- Advertisement -


‘ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಹಲವು ಬಳಕೆದಾರರು ದೂರಿದ್ದು, ‘something went wrong’ ಎಂದು ತೋರಿಸುವ ಫೋಟೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಪದೇ ಪದೇ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದಕ್ಕೆ ಮೆಟಾ ವಿರುದ್ಧ ಕಿಡಿಕಾರಿದ್ದಾರೆ.



Join Whatsapp