ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಎನ್‌ಸಿಪಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಲಿ; ನಾವು ಬೆಂಬಲಿಸುತ್ತೇವೆ: ಉದ್ಧವ್ ಠಾಕ್ರೆ

Prasthutha|

- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ತಮ್ಮ ಮೈತ್ರಿ ಪಾಲುದಾರರಾದ ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಘೋಷಿಸಿದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮಾಜಿ ಸಿಎಂ ಉದ್ಧವ್ ಠಾಕ್ರೆ ರಾಜ್ಯ ಮಟ್ಟದಲ್ಲಿ ಶಿವಸೇನೆ ಆಯೋಜಿಸಿದ್ದ ವಜ್ರ ನಿರ್ಧಾರ್ ಪರಿಷತ್ತಿನ ಕಾರ್ಯಕ್ರಮದಲ್ಲಿ ಇಂದು ಮಾತನಾಡುತ್ತಾ, ಮಹಾರಾಷ್ಟ್ರದಲ್ಲಿ ಗೆಲುವು ಸಾಧಿಸುವ ಮಹತ್ವವನ್ನು ಎತ್ತಿ ತೋರಿಸಿದರು. ಮೈತ್ರಿ ಪಾಲುದಾರರಿಗೆ ತಮ್ಮ ಬೆಂಬಲವನ್ನು ಘೋಷಿಸಿದರು. “ಕಾಂಗ್ರೆಸ್ ಅಥವಾ ಎನ್‌ಸಿಪಿ ಮುಖ್ಯಮಂತ್ರಿಯ ಅಭ್ಯರ್ಥಿಯನ್ನು ಘೋಷಿಸಬೇಕು. ನಾನು ಅವರನ್ನು ಬೆಂಬಲಿಸುತ್ತೇನೆ. ಏಕೆಂದರೆ ಮಹಾರಾಷ್ಟ್ರ ನಮಗೆ ಬಹಳ ಮುಖ್ಯವಾಗಿದೆ” ಎಂದು ಠಾಕ್ರೆ ಹೇಳಿದ್ದಾರೆ.

- Advertisement -

ಉದ್ಧವ್ ಠಾಕ್ರೆ ಅವರು ಬಿಜೆಪಿಯನ್ನು ಕಟುವಾಗಿ ಟೀಕಿಸಿದರು. ಬಿಜೆಪಿ ನಾಯಕರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಇಡೀ ದೇಶದಲ್ಲಿ ಹೋರಾಟವನ್ನು ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.



Join Whatsapp