ಅನಿರೀಕ್ಷಿತ ಫಲಿತಾಂಶವನ್ನು ವಿಶ್ಲೇಷಿಸಿ ಆಯೋಗಕ್ಕೆ ದೂರು: ರಾಹುಲ್​ ಗಾಂಧಿ

Prasthutha|

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಎದುರಾಗಿರುವ ಅನಿರೀಕ್ಷಿತ ಫಲಿತಾಂಶದ ಕುರಿತು ಕಾಂಗ್ರೆಸ್ ಪಕ್ಷ ಅವಲೋಕನ ನಡೆಸಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

- Advertisement -


ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳು. ರಾಜ್ಯದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಸಿಕ್ಕಿರುವ ಜನಾದೇಶವು ಸಂವಿಧಾನ, ಪ್ರಜಾಪ್ರಭುತ್ವ, ಸ್ವಾಭಿಮಾನಕ್ಕೆ ಸಂದಿರುವ ಗೆಲುವಾಗಿದೆ’ ಎಂದು ಬಣ್ಣಿಸಿದ್ದಾರೆ.

- Advertisement -

‘ನಾವು ಹರಿಯಾಣದ ಅನಿರೀಕ್ಷಿತ ಫಲಿತಾಂಶದ ಕುರಿತಾಗಿಯೂ ಅವಲೋಕನ ನಡೆಸಲಿದ್ದೇವೆ. ಹಲವು ವಿಧಾನಸಭಾ ಕ್ಷೇತ್ರಗಳಿಂದ ಬರುತ್ತಿರುವ ದೂರುಗಳ ಬಗ್ಗೆಯೂ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಿದ್ದೇವೆ’ ಎಂದು ತಿಳಿಸಿದ್ದಾರೆ.

‘ಹರಿಯಾಣದ ಜನತೆಯ ಬೆಂಬಲ, ದವಣಿವರಿಯದೆ ಕೆಲಸ ಮಾಡಿರುವ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ’ ಎಂದು ಅವರು ಹೇಳಿದ್ದಾರೆ.

‘ಜನರ ಹಕ್ಕುಗಳಿಗಾಗಿ, ಸಾಮಾಜಿಕ, ಆರ್ಥಿಕ ನ್ಯಾಯಕ್ಕಾಗಿ ಮತ್ತು ಸತ್ಯಕ್ಕಾಗಿ ಹೋರಾಟವನ್ನು ಮುಂದುವರಿಸಲಿದ್ದೇವೆ. ನಿಮ್ಮ ಧ್ವನಿಯಾಗಲಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.



Join Whatsapp