ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Prasthutha|

ಬೆಂಗಳೂರು: ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

- Advertisement -

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೀಗಾಗಿ ಮುಂದಿನ ವರ್ಷದಿಂದ 10ನೇ ತರಗತಿ ಮಕ್ಕಳಿಗೆ ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ ಎಂದು ಹೇಳಿದರು.

ಈ ವರ್ಷ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಫಲಿತಾಂಶ ಶೇ. 73.40 ಆಗಿದೆ. ಕಳೆದ ವರ್ಷ ಶೇ೮೩ ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 2288 ಶಾಲೆಗಳು ಶೇ. 100 ರಷ್ಟು ಫಲಿತಾಂಶ ಪಡೆದಿವೆ. ಶಾಲಾ ಶಿಕ್ಷಣ ಇಲಾಖೆ ಈ ವರ್ಷ 1.70 ಲಕ್ಷ 10ನೇ ತರಗತಿ ಮಕ್ಕಳಿಗೆ ಶೇ೨೦ ರಷ್ಟು ಕೃಪಾಂಕ ನೀಡಿತ್ತು. ಆದರೂ ಕೂಡ ಕಳೆದ ವರ್ಷಕ್ಕಿಂತ ಈ ವರ್ಷ ಶೇ. 10 ರಷ್ಟು ಕುಸಿತವಾಗಿದೆ.

- Advertisement -

ಈ ಗ್ರೇಸ್ ಮಾರ್ಕ್ಸ್ ನೀಡಿದ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಗರಂ ಆಗಿದ್ದರು. ಇದೀಗ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮುಂದಿನ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡುಡುವುದಿಲ್ಲ ಎಂದಿದ್ದಾರೆ.

ಈ ಹಿಂದೆ ಮಂಡಳಿಯು ಶೇ. 5-10 ರಷ್ಟು ಗ್ರೇಸ್ ಮಾರ್ಕ್ಸ್ ನೀಡುತ್ತಿತ್ತು. ಆದರೆ ಮಂಡಳಿಯು ಈ ವರ್ಷ ಶೇ. 20 ರಷ್ಟು ಹೆಚ್ಚಳ ಗ್ರೇಸ್ ಮಾರ್ಕ್ಸ್ ನೀಡಿದ್ದು, ಅನುತ್ತೀರ್ಣಗೊಳ್ಳುವ ಅಂಚಿನಲ್ಲಿದ್ದ ವಿದ್ಯಾರ್ಥಿಗಳಿಗೆ ವರದಾನವಾಗಿತ್ತು.



Join Whatsapp