ಮಂಗಳೂರು ದಸರಾ: ಬರೋಬ್ಬರಿ 22 ಲಕ್ಷ ಬಲ್ಬುಗಳಿಂದ ಅಲಂಕಾರ

Prasthutha|

ಮಂಗಳೂರು: ಮಂಗಳೂರು ದಸರಾ ಕೂಡ ಮೈಸೂರು ದಸರಾದಷ್ಟೇ ಪ್ರಖ್ಯಾತಿ ಪಡೆದಿದೆ.

- Advertisement -


ಇದೀಗ ದಸರಾ ಸಂಭ್ರಮದಲ್ಲಿ ಬೆಳಕಿನ ಚಿತ್ತಾರದಿಂದ ಎಲ್ಲರನ್ನೂ ಸ್ವಾಗತಿಸಲು ಸಿದ್ಧವಾಗಿ ನಿಂತಿದೆ.


ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಿಂದ ಮೆರವಣಿಗೆ ಹಾದುಹೋಗುವ ನಗರದ ಸುಮಾರು 7ಕಿ.ಮೀ. ರಸ್ತೆಯುದ್ದಕ್ಕೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.

- Advertisement -


ಬರೋಬ್ಬರಿ 22 ಲಕ್ಷ ಬಲ್ಬುಗಳನ್ನು ಬಳಸಿ ದೀಪಾಲಂಕಾರ ಮಾಡಲಾಗಿದೆ. ಈ ಬೆಳಕಿನ ಚಿತ್ತಾರ ಮಂಗಳೂರು ದಸರಾವನ್ನು ಮತ್ತಷ್ಟು ಕಂಗೊಳಿಸುವಂತೆ ಮಾಡಿದೆ.


ಮಂಗಳೂರು ದಸರಾವನ್ನು ಕಟ್ತುಂಬಿಕೊಳ್ಳಲು ರಾಜ್ಯದ ಬೇರೆ ಬೇರೆ ಕಡೆಯಿಂದ ಜನರು ಆಗಮಿಸುತ್ತಾರೆ. ಅ.13 ರಂದು ಅದ್ದೂರಿ ದಸರಾ ಮೆರವಣಿಗೆ ನಡೆಯಲಿದ್ದು, ಭರ್ಜರಿಯಾಗಿ ಅಲಂಕೃತಗೊಂಡಿದೆ.



Join Whatsapp