ಈ ವರ್ಷ ಹಾಲಿನ ದರದಲ್ಲಿ ಏರಿಕೆ ಇಲ್ಲ: ಯಥಾಸ್ಥಿತಿ ಮುಂದುವರಿಕೆ

Prasthutha|

ಬೆಂಗಳೂರು: ಹಾಲಿನ ದರ ಏರಿಕೆ ಮಾಡುವುದಾಗಿ ಕೆಎಂಎಫ್ ಹಲವು ಬಾರಿ ಸರ್ಕಾರದೊಂದಿಗೆ ಮಾತು ಕತೆ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈಗ ಸರ್ಕಾರ ಹಾಗೂ ಕೆಎಂಎಫ್ ದರ ಏರಿಕೆ ಮಾಡುವ ನಿರ್ಧಾರದಿಂದ ಹಿಂದೆ ಸರಿದಿದೆ ಎನ್ನಲಾಗಿದೆ.

- Advertisement -


ಕಳೆದ ಕೆಲ ದಿನಗಳ ಹಿಂದಷ್ಟೇ ಸಿಎಂ ಸಮಾವೇಶವೊಂದರಲ್ಲಿ ಬಹಿರಂಗವಾಗಿ ದರ ಏರಿಕೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಅದು ಕೂಡ ಏರಿಕೆ ಕಂಡ ಹಣವನ್ನ ನೇರವಾಗಿ ರೈತರಿಗೆ ತಲುಪಿಸುವ ಬಗ್ಗೆ ಕೂಡ ಸುಳಿವು ಕೊಟ್ಟಿದ್ದರು.


ಆ ಬೆನ್ನಲ್ಲೆ ಕೆಎಂಎಫ್ ಕೂಡ ಏರಿಕೆ ಸಂಬಂಧ ಕೆಲ ಸಭೆಗಳನ್ನು ಮಾಡಿ ಏರಿಕೆಗೆ ಬೇಕಾದಂತ 2023ರ ಪ್ರಸ್ತಾವನೆ ಸಲ್ಲಿಕೆಗೂ ತಯಾರಿ ಮಾಡಿತ್ತು. ಈ ಬೆನ್ನಲ್ಲೆ ಸದ್ಯ ದರ ಏರಿಕೆ ಬೇಡ ಅನ್ನೋ ನಿರ್ಧಾರಕ್ಕೆ ಸರ್ಕಾರ ಬಂದಿದೆ.

- Advertisement -


ಇದೇ ವರ್ಷ ಈಗಾಗಲೇ ಎರಡು ಬಾರಿ ಏರಿಕೆ ಕಂಡಿದ್ದ ಹಾಲಿನ ದರ, ಮತ್ತೆ ಏರಿಕೆಯಾದ್ರೆ ಹೇಗೆ ಅನ್ನೋ ಆತಂಕ ಗ್ರಾಹಕರಲ್ಲಿ ಮನೆ ಮಾಡಿತ್ತು. ಅಲ್ಲದೇ ಈಗಾಗಲೇ . ಲೀಟರ್ ಗೆ 48 ರೂ ತಲುಪಿದ್ದು, ಮತ್ತೆ ಹೆಚ್ಚಾದರೆ ಹೇಗೆ ಅನ್ನೋ ಆತಂಕ ಕೂಡ ಗ್ರಾಹಕರಲ್ಲಿ ಮೂಡಿತ್ತು.



Join Whatsapp