ಅ. 15ರಂದು ನಯಾಬ್ ಸೈನಿ ಹರ್ಯಾಣ ಸಿಎಂ ಆಗಿ ಪ್ರಮಾಣವಚನ

Prasthutha|

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನು ದಾಖಲೆಯ ಮೂರನೇ ಗೆಲುವಿನತ್ತ ಮುನ್ನಡೆಸಿರುವ ಬಿಜೆಪಿ ನಾಯಕ ನಯಾಬ್ ಸಿಂಗ್ ಸೈನಿ ಅವರು ಅಕ್ಟೋಬರ್ 15 ರಂದು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

- Advertisement -


ಪ್ರಮಾಣ ವಚನ ಸ್ವೀಕಾರ ಸಮಾರಂಭದ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ರಾಜ್ಯ ಮುಖ್ಯ ಕಾರ್ಯದರ್ಶಿ 10 ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ.


ಸಮಿತಿಯ ನೇತೃತ್ವವನ್ನು ಪಂಚಕುಲ ಜಿಲ್ಲಾಧಿಕಾರಿ ವಹಿಸಲಿದ್ದಾರೆ.

- Advertisement -


ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.



Join Whatsapp