ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಪತ್ನಿಗೆ ಬಿಜೆಪಿ ಟಿಕೆಟ್

Prasthutha|

ಲಖನೌ : 2018ರ ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಪತ್ನಿ ಸಂಗೀತಾ ಅವರಿಗೆ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ.

- Advertisement -

ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸೆಂಗಾರ್ ಅಪರಾಧಿಯೆಂದು ಸಾಬೀತಾಗಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಇದೀಗ ಮಾಜಿ ಶಾಸಕನ ಪತ್ನಿಗೆ ಬಿಜೆಪಿ ಟಿಕೆಟ್​ ನೀಡಿದ್ದು, ಭಾರಿ ವಿವಾದ ಸೃಷ್ಟಿಸಿದೆ.

ಉನ್ನಾವೊದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಸಂಗೀತಾ, ಫತೇಪುರ್ ಚೌರಾಸಿ ತ್ರಿತಾಯ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

- Advertisement -

ಉತ್ತರ ಪ್ರದೇಶ ಪಂಚಾಯತ್ ಚುನಾವಣೆ ಏಪ್ರಿಲ್ 15 ರಿಂದ ನಾಲ್ಕು ಹಂತಗಳಲ್ಲಿ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.



Join Whatsapp