18 ವರ್ಷಕ್ಕಿಂತ ಮೇಲ್ಪಟ್ಟ ಯಾರಿಗೂ ತಮಗಿಷ್ಟವಾದ ಧರ್ಮವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವಿದೆ : ಸುಪ್ರೀಂ ಕೋರ್ಟ್

Prasthutha|

►ಬಲವಂತದ ಮತಾಂತರ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

- Advertisement -

ಹೊಸದಿಲ್ಲಿ : 18 ವರ್ಷಕ್ಕಿಂತ ಮೇಲ್ಪಟ್ಟ ಯಾರಿಗೂ ತಮಗಿಷ್ಟವಾದ ಧರ್ಮವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವಿದೆ. ಸಂವಿಧಾನದಲ್ಲಿ ಅದಕ್ಕೆ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬಲವಂತದ ಮತಾಂತರ ನಿಷೇಧಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌ಎಫ್ ನಾರಿಮನ್ ನೇತೃತ್ವದ ಸುಪ್ರೀಂ ಕೋರ್ಟ್ನ ನ್ಯಾಯಪೀಠ ತಿರಸ್ಕರಿಸಿದೆ.

ಬಲವಂತದ ಮತಾಂತರವನ್ನು ತಡೆಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಇಂತಹ ಅರ್ಜಿಗಳು ಪ್ರಚಾರಕ್ಕಾಗಿ ಮಾತ್ರವಾಗಿದೆ ಎಂದು ಹೇಳಿದೆ. ಈ ಅರ್ಜಿಯನ್ನು ಬಿಜೆಪಿ ಕಾರ್ಯಕರ್ತ, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದರು. ದೇಶದಲ್ಲಿ ದೊಡ್ಡ ಪ್ರಮಾಣದ ಮತಾಂತರಗಳು ನಡೆಯುತ್ತಿವೆ. ಇದನ್ನು ತಡೆಯಬೇಕೆಂದು ಕೋರಿ ಅವರು ಅರ್ಜಿ ಸಲ್ಲಿಸಿದ್ದರು.

- Advertisement -

18 ವರ್ಷಕ್ಕಿಂತ ಮೇಲ್ಪಟ್ಟ ಯಾರಿಗೂ ತಮಗಿಷ್ಟವಾದ ಧರ್ಮವನ್ನು ಆಯ್ಕೆ ಮಾಡಲು ಸ್ವಾತಂತ್ರ್ಯವಿದೆ. ಇಂತಹ ಅರ್ಜಿಗಳೊಂದಿಗೆ ಸುಪ್ರೀಂ ಕೋರ್ಟ್‌ಗೆ ಬರುವವರಿಗೆ ದಂಡ ವಿಧಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಇದೇ ವೇಳೆ ಅರ್ಜಿಯನ್ನು ಹಿಂಪಡೆಯುತ್ತಿರುವುದಾಗಿ ಅರ್ಜಿದಾರ ತಿಳಿಸಿದ್ದಾರೆ.



Join Whatsapp