ರಾಜ್ಯ ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡುತ್ತಿದೆ: ಎಚ್‌ ಡಿ ಕುಮಾರಸ್ವಾಮಿ

Prasthutha|

- Advertisement -

ದಾವಣಗೆರೆ: ರಾಜ್ಯ ಸರ್ಕಾರ ಕಾನೂನು ಬಾಹಿರ ಚಟುವಟಿಕೆ ನಡೆಸಿದವರಿಗೆ ರಿಲೀಫ್ ಕೊಟ್ಟಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆ ಸಚಿವ ಎಚ್.ಡಿ. ಕುಮಾರಸ್ವಾಮಿ ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ನೋಡಿದರೆ ರಾಜ್ಯ ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡುತ್ತಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.‌

- Advertisement -

ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿರುವ ಮಾದರಿಯಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಹ ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿ ಯಾದರೂ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದರು.



Join Whatsapp