ಬಾಂಬ್ ಬೆದರಿಕೆ: ಮುಂಬೈ–ನ್ಯೂಯಾರ್ಕ್ ವಿಮಾನ ದೆಹಲಿಯಲ್ಲಿ ಲ್ಯಾಂಡ್

Prasthutha|

ನವದೆಹಲಿ: ಮುಂಬೈನಿಂದ 239 ಪ್ರಯಾಣಿಕರನ್ನು ಹೊತ್ತು ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ.

- Advertisement -


ಭದ್ರತಾ ದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

- Advertisement -


‘ಸದ್ಯ ವಿಮಾನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಹೆಚ್ಚಿನ ಶಿಷ್ಟಾಚಾರಗಳನ್ನು ಪಾಲಿಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Join Whatsapp