ಭಾರೀ ಮಳೆ: ನಾಳೆ (ಅ.16) ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Prasthutha|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು(ಅಕ್ಟೊಬರ್ 15) ಬೆಳಗ್ಗೆಯಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಳೆ(ಅಕ್ಟೋಬರ್ 16) ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

- Advertisement -

ಮಳೆ ನಗರದ ಹಲವೆಡೆ ಭಾರೀ ಅನಾಹುತ ಸೃಷ್ಟಿಸಿದೆ. ಆದರೂ ಮುಂದಿನ ಮೂರು ದಿನ ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ರಾಜಧಾನಿಯಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.



Join Whatsapp