ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ. ನಾಗೇಂದ್ರ ಬಿಡುಗಡೆ

Prasthutha|

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿಂದ ಬುಧವಾರ ಬಿಡುಗಡೆಯಾದರು.

- Advertisement -

ನೆಚ್ಚಿನ ನಾಯಕ ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರು ಸಂಭ್ರಮಿಸಿದರು. ನಾಯಕನನ್ನು ಮೇಲೆತ್ತಿ ಕುಣಿದರು. ಹೂವಿನ ಹಾರ ಹಾಕಿ, ಬೂದಗುಂಬಳ ಹೊಡೆದು ಸಂಭ್ರಮಾಚರಿಸಿದರು.

ಜೈಲಿನಿಂದ ಹೊರಬರುತ್ತಿದ್ದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದು, ದೇಶದಲ್ಲಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಷಡ್ಯಂತ್ರ ನಡೆಸಿದೆ ಎಂದು ಆರೋಪ ಮಾಡಿದ್ದಾರೆ.

- Advertisement -

ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನಿಂದ ಯಾವುದೇ ತಪ್ಪು ನಡೆದಿಲ್ಲ, ಆದರೂ ನನ್ನನ್ನು ಬಂಧಿಸಿ ಇಡಿ ಅಧಿಕಾರಿಗಳು 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕರ ಒತ್ತಡದಿಂದ ಹೀಗೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಎಸ್​ಐಟಿ ನನ್ನ ಪಾತ್ರ ಇಲ್ಲ ಅಂದ್ರೂ ಕೇಂದ್ರ, ಬಿಜೆಪಿಯಿಂದ ಷಡ್ಯಂತ್ರ ರೂಪಿಸಿದೆ. ಇದು ಬ್ಯಾಂಕ್ ಮತ್ತು ಬ್ಯಾಂಕ್​​ ಅಧಿಕಾರಿಗಳಿಂದ ಆಗಿರುವ ಹಗರಣ. ವಿನಾಕಾರಣ ನಮ್ಮ ಸರ್ಕಾರವನ್ನು ಸಿಲುಕಿಸುವ ಕೆಲಸ ಮಾಡಲಾಗಿದೆ. ಕೇಂದ್ರ ಹಾಗೂ ಬಿಜೆಪಿಯಿಂದ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಕೇಂದ್ರದ ಯಾವುದೇ ಬೆದರಿಕೆಗಳಿಗೆ ಕಾಂಗ್ರೆಸ್ ಹೆದರುವುದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.



Join Whatsapp