ಮುಡಾ ಪ್ರಕರಣ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ

Prasthutha|

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -


ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ ಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.


ರಾಜೀನಾಮೆ ವಿಚಾರವಾಗಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದು, ಇಂದು ಅಧಿಕಾರಿಗಳಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.



Join Whatsapp