ಶಾಸಕಾಂಗ ಪಕ್ಷದ ನಾಯಕನಾಗಿ ಸೈನಿ ಅವಿರೋಧ ಆಯ್ಕೆ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ

Prasthutha|

ಚಂಡೀಗಢ: ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ.

- Advertisement -


ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ ಅವರ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.


ವೀಕ್ಷಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಅನಿಲ್ ವಿಜ್ ಮತ್ತು ಕೃಷ್ಣಾ ಬೇಡಿ ಅವರು ನಯಾಬ್ ಸಿಂಗ್ ಸೈನಿ ಅವರ ಹೆಸರಿನ ಪ್ರಸ್ತಾವನೆ ಮುಂದಿಟ್ಟರು. ಪ್ರಸ್ತಾವನೆಗೆ ಅವಿರೋಧವಾಗಿ ಶಾಸಕರು ಬೆಂಬಲ ಸೂಚಿಸಿದ ಹಿನ್ನೆಲೆ ಸೈನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಯಿತು.

- Advertisement -


ಗುರುವಾರ ಬೆಳಗ್ಗೆ 11:30ಕ್ಕೆ ಪಂಚಕುಲದಲ್ಲಿ ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಹಾರ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ನಾಗಾಲ್ಯಾಂಡ್ ಮತ್ತು ಪುದುಚೆರಿ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.



Join Whatsapp