ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ..!

Prasthutha|

- Advertisement -

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.

ದಿನೇಶ್ ಗುಂಡೂರಾವ್ ಪತ್ನಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಕೆ‌.ಎನ್.ಶಿವಕುಮಾರ್ ಅವರು ಈ ಆದೇಶ ಮಾಡಿದ್ದಾರೆ.

- Advertisement -

ಯತ್ನಾಳ್ ಗೆ ಬುಧವಾರ ವಿಚಾರಣೆಗೆ ನೋಟಿಸ್ ನೀಡಿದ್ದರು. ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.



Join Whatsapp