ಸುಪ್ರೀಂಕೋರ್ಟ್​ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

Prasthutha|

ನವದೆಹಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ, ತಮ್ಮ ಉತ್ತರಾಧಿಕಾರಿಯಾಗಿ ಸಂಜಿವ್ ಖನ್ನಾ ಹೆಸರನ್ನು ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು ಮಾಡಿದ್ದಾರೆ.

- Advertisement -

ಸುಪ್ರೀಂಕೋರ್ಟ್‌ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ವಿಚಾರವಾಗಿ ಕೊಲಿಜಿಯಂನಲ್ಲಿ ಬಿಕ್ಕಟ್ಟು ಎದುರಾಗಿರುವ ನಡುವೆಯೇ, ಸಂಪ್ರದಾಯದಂತೆ ಸಿಜೆಐ ಅವರು ತಮ್ಮ ನಂತರದ ಹಿರಿಯ ನ್ಯಾಯಮೂರ್ತಿಯ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.

ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10ರಂದು ಅಧಿಕಾರದಿಂದ ನಿವೃತ್ತರಾಗುತ್ತಿರುವುದರಿಂದ, ನ್ಯಾಯಮೂರ್ತಿ ಖನ್ನಾ ತಮ್ಮ ಉತ್ತರಾಧಿಕಾರಿಯಾಗಬೇಕು ಎಂದು ಕೇಂದ್ರಕ್ಕೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿದ್ದಾರೆ.

- Advertisement -

ಸಿಜೆಐ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ನಂತರ ನವೆಂಬರ್ 10 ರಂದು ನಿವೃತ್ತರಾಗಲಿದ್ದಾರೆ. ಅವರು ಡಿಸೆಂಬರ್ 17, 2022 ರಂದು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.



Join Whatsapp