ಬಿಹಾರ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

Prasthutha|

ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತರ ಹಾಗೂ ಚಿಕಿತ್ಸೆಗೆ ಒಳಪಟ್ಟವರ ಯಾವುದೇ ಗುರುತನ್ನು ಬಹಿರಂಗಪಡಿಸಿಲ್ಲ.

ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ 7:30 ಸುಮಾರಿಗೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಇನ್ನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.



Join Whatsapp