ಮುಡಾ ಕಚೇರಿ ಮೇಲೆ ಇಡಿ ದಾಳಿ..!

Prasthutha|

- Advertisement -

20ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.

- Advertisement -

ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಆರ್​ಐಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇಲೆ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಇಡಿಯ 20ಕ್ಕೂ ಹೆಚ್ಚು ಅಧಿಕಾರಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.



Join Whatsapp