ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ.
ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಎಲ್ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದೆ. ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.