ಬಿಜೆಪಿ-ಜೆಡಿಎಸ್​ ಮೈತ್ರಿಯಲ್ಲಿ ಬಿರುಕು: ಪರಿಷತ್ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ..!

Prasthutha|

- Advertisement -

ಹುಬ್ಬಳ್ಳಿ: ಚನ್ನಪಟ್ಟಣ ಉಪಚುನಾವಣೆ ಟಿಕೆಟ್​​ ಸಂಬಂಧ ಜೆಡಿಎಸ್​ ಬಿಜೆಪಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್​​ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಬೆಂಗಳೂರಿನಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್​ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. ಅಲ್ಲದೇ ಹೈಕಮಾಂಡ್​ ಸಹ ಜೆಡಿಎಸ್​ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಇನ್ನು ಜೆಡಿಎಸ್​ ಚಿಹ್ನೆಯಿಂದ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಸಹ ಸಿಪಿ ಯೋಗೇಶ್ವರ್​​ಗೆ ಆಫರ್ ನೀಡಿದ್ದರು. ಆದ್ರೆ, ಸಿಪಿ ಯೋಗೇಶ್ವರ್ ಜೆಡಿಎಸ್​ನಿಂದ ಸ್ಪರ್ಧಿಸಲು ನಿರಾಕರಿಸಿದ್ದು, ಇದೀಗ ಬಿಜೆಪಿಯ ಪರಿಷತ್​ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.



Join Whatsapp