ಫರಂಗಿಪೇಟೆ: ತಲವಾರು ದಾಳಿ; ಇಬ್ಬರಿಗೆ ಗಾಯ

Prasthutha|

ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ ನಡೆದಿದೆ.

- Advertisement -

ಅಮ್ಮೆಮಾರ್ ನಿವಾಸಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಸ್ಲೀಮ್ ಮತ್ತು ಮಹಮ್ಮದ್ ಶಾಕೀರ್ ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಹಾಕಿದ್ದಾನೆ ಎನ್ನಲಾಗಿದೆ.

- Advertisement -

ಈ ವೇಳೆ ತಸ್ಲೀಮ್ ಮತ್ತು ಮಹಮ್ಮದ್ ಶಾಕೀರ್ ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ ಆರೋಪಿಗಳು ತಲವಾರಿನಿಂದ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp