ಭಾರಿ ಮಳೆ ಸಾಧ್ಯತೆ: ಕೇರಳದ ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Prasthutha|

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಐದು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.

- Advertisement -


ತಿರುವನಂತಪುರ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ರಾಜ್ಯದ ಇತರ ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.


ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp