ಇರಾನ್ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Prasthutha|

ಇರಾನ್ ಮಿಲಿಟರಿ ಮೇಲೆ ಗುರಿಯಾಗಿಸಿ ಇಸ್ರೇಲ್ ಶನಿವಾರ ಮುಂಜಾನೆ ವೈಮಾನಿಕ ದಾಳಿ ಆರಂಭಿಸಿದೆ.

- Advertisement -


ದಾಳಿಯಿಂದಾದ ಸಾವು ನೋವಿನ ಬಗ್ಗೆ ತಕ್ಷಣದ ಮಾಹಿತಿ ಸಿಕ್ಕಿಲ್ಲ. ಇರಾನ್ ನಲ್ಲಿನ ಮಿಲಿಟರಿ ಗುರಿಗಳ ಮೇಲೆ ನಡೆಸಲಾದ ನಿಖರವಾದ ದಾಳಿ ಎಂದು ಇಸ್ರೇಲ್ ಮಿಲಿಟರಿ ಹೇಳಿಕೊಂಡಿದೆ.


ಬೆಳಿಗ್ಗೆ 2 ಗಂಟೆಯ ಸುಮಾರಿಗೆ ದಕ್ಷಿಣ ಹಾಗೂ ಕೇಂದ್ರ ಸಿರಿಯಾದ ಹಲವು ಮಿಲಿಟರಿ ತಾಣಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎಂದು ಸರ್ಕಾರಿ ಸ್ವಾಮ್ಯದ ಸನಾ ಸುದ್ದಿಸಂಸ್ಥೆ ಹೇಳಿದೆ.

- Advertisement -


ಇಸ್ರೇಲ್ ದಾಳಿಗೆ ಪ್ರತಿಯಾಗಿ ಸಿರಿಯಾದ ವಾಯು ರಕ್ಷಣಾ ವ್ಯವಸ್ಥೆ ಇಸ್ರೇಲ್ ನ ಹಲವು ಕ್ಷಿಪಣಿಗಳನ್ನು ಹೊಡೆದುರುಳಿಸಿದೆ ಮತ್ತು ಹಾನಿಯನ್ನು ಅಧಿಕಾರಿಗಳು ಅಂದಾಜಿಸುತ್ತಿದ್ದಾರೆ ಎಂದು ಸನಾ ಹೇಳಿದೆ.


ವಾಯುಪಡೆಯ ಮುಖ್ಯಸ್ಥ ಮೇಜರ್ ಜನರಲ್ ಥೋಮರ್ ಬಾರ್ ಜತೆಗೆ ಲೆಫ್ಟಿನೆಂಟ್ ಜನರಲ್ ಹೆರ್ಝಿ ಹಲೇವಿ ಇರಾನ್ ಮೇಲಿನ ದಾಳಿಯ ನೇತೃತ್ವ ವಹಿಸಿದ್ದಾರೆ ಎಂದು ಐಡಿಎಫ್ ಹೇಳಿದೆ.



Join Whatsapp