ಡಾನಾ ಚಂಡಮಾರುತ: ಪಶ್ಚಿಮ ಬಂಗಾಳದಲ್ಲಿ ಮತ್ತೆರಡು ಸಾವು

Prasthutha|

ಕೋಲ್ಕತ್ತ: ಡಾನಾ ಚಂಡಮಾರುತದ ಪರಿಣಾಮ ಪಶ್ಚಿಮ ಬಂಗಾಳದಲ್ಲಿ ಮತ್ತಿಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

- Advertisement -


ಪೂರ್ವ ವರ್ಧಮಾನ ಜಿಲ್ಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸ್ವಯಂಸೇವಕ ಚಂದನ್ ದಾಸ್ (31) ಮೃತಪಟ್ಟಿದ್ದಾರೆ. ತಂತಿಪಾರಾ ಸಮೀಪದ ಜಲಾವೃತಗೊಂಡ ರಸ್ತೆಯಲ್ಲಿ ಹೌರಾ ಮುನ್ಸಿಪಲ್ ಕಾರ್ಪೊರೇಶನ್ ನ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದೆ. ನೀರಿನಲ್ಲಿ ಮುಳುಗಿ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.


ರಾಜ್ಯದಲ್ಲಿ ಶುಕ್ರವಾರ ವಿದ್ಯುತ್ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

- Advertisement -


ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಹಾಗೂ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಶುಕ್ರವಾರ ಭಾರಿ ಮಳೆಯಾಗಿದೆ.




Join Whatsapp