ನವದೆಹಲಿ: ವಿಮಾನಗಳಿಗೆ ‘ಹುಸಿ ಬಾಂಬ್ ಬೆದರಿಕೆ’ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಶುಭಂ ಉಪಾಧ್ಯಾಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
25 ವರ್ಷದ ಶುಭಂ ಉಪಾಧ್ಯಾಯ ನಿರುದ್ಯೋಗಿಯಾಗಿದ್ದು,12ನೇ ತರಗತಿವರೆಗೆ ವಿದ್ಯಾಭ್ಯಾಸವನ್ನು ಮಾಡಿದ್ದಾನೆ.
ಸಾಮಾಜಿಕ ಮಾಧ್ಯಮದಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆ ಎರಡು ಬೆದರಿಕೆ ಸಂದೇಶಗಳು ಬಂದಿವೆ.
ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಈ ಖಾತೆಯು ಪಶ್ಚಿಮ ದಿಲ್ಲಿಯ ಉತ್ತಮ್ ನಗರ ಪ್ರದೇಶದ ರಾಜಪುರಿ ಮೂಲದ ಶುಭಂ ಉಪಾಧ್ಯಾಯ ಎಂಬಾತನಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಉಪಾಧ್ಯಾಯನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ʼಟಿವಿಯಲ್ಲಿ ಬೆದರಿಕೆ ಕರೆಗಳ ಬಗ್ಗೆ ವರದಿಗಳನ್ನು ನೋಡಿ ತಾನು ಕೂಡ ಪ್ರಚಾರಕ್ಕೆ ಬೆದರಿಕೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೆ ಅಧಿಕಾರಿಗಳಿಗೆ ತಿಳಿಸುವಂತೆ ನಾವು ಕೇಳಿಕೊಳ್ಳುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ ಎಂದು ವರದಿಯಾಗಿದೆ.