ಮಹಾರಾಷ್ಟ್ರ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲ್ಲ: ಮಹಾ ವಿಕಾಸ್‌ ಅಘಾಡಿ ಒಕ್ಕೂಟಕ್ಕೆ ಬೆಂಬಲ

Prasthutha|

- Advertisement -

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಸ್ಪರ್ಧಿಸುವುದಿಲ್ಲ. ಮಹಾ ವಿಕಾಸ್‌ ಅಘಾಡಿ ಒಕ್ಕೂಟದ ಪರ ಪ್ರಚಾರ ನಡೆಸಲಿದೆ ಎಂದು ಎಎಪಿ ನಾಯಕ ಸಂಜಯ್‌ ಸಿಂಗ್‌ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಮಹಾರಾಷ್ಟ್ರ ಚುನಾವಣೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಎಂವಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಆಮ್ ಆದ್ಮಿ ಪಕ್ಷವು ಮಹಾರಾಷ್ಟ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

- Advertisement -

ಮಹಾರಾಷ್ಟ್ರದಲ್ಲಿ ಅರವಿಂದ್ ಕೇಜ್ರಿವಾಲ್ ಪ್ರಚಾರ ಮಾಡುತ್ತಿರುವ ಬಗ್ಗೆ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ-ಎಸ್‌ಪಿ ಪಕ್ಷವನ್ನು ಸಂಪರ್ಕಿಸಿವೆ. ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಹೇಮಂತ್ ಸೋರೆನ್ ಅವರ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಪರ ಪ್ರಚಾರ ಮಾಡಲು ಅರವಿಂದ್ ಕೇಜ್ರಿವಾಲ್ ಕೂಡ ಸಿದ್ಧರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಎಂವಿಎ ಒಕ್ಕೂಟವು ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ), ಶರದ್ ಪವಾರ್ ಅವರ ಎನ್‌ಸಿಪಿ-ಎಸ್‌ಪಿ ಮತ್ತು ಕಾಂಗ್ರೆಸ್ ಅನ್ನು ಒಳಗೊಂಡಿದೆ.

ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಸ್ಥಾನಗಳಿದ್ದು, ನ.20 ರಂದು ಮತದಾನ ನಡೆಯಲಿದೆ. ಜಾರ್ಖಂಡ್‌ನಲ್ಲಿ ನ.13 ಮತ್ತು 20 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಎರಡೂ ರಾಜ್ಯಗಳ ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ.



Join Whatsapp