ರಸ್ತೆ ಬದಿ ಮೊಮೊಸ್ ತಿಂದ ಮಹಿಳೆ ಸಾವು: 20 ಮಂದಿ ಅಸ್ವಸ್ಥ

Prasthutha|

ಹೈದರಾಬಾದ್: ರಸ್ತೆ ಬದಿಯ ಮೊಮೊಸ್ ತಿಂದು ಮಹಿಳೆ ಮೃತಪಟ್ಟು 20ಕ್ಕೂ ಅಧಿಕ ಜನರು ಆಸ್ವಸ್ಥಗೊಂಡಿರುವ ಘಟನೆ ಹೈದರಾಬಾದ್ ನ ಬಂಜಾರ ಹಿಲ್ಸ್ ಬಳಿ ಫುಡ್ ಸ್ಟಾಲ್ ನಲ್ಲಿ ನಡೆದಿದೆ.

- Advertisement -


ಬಂಜಾರಾ ಹಿಲ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸದ್ಯ ತನಿಖೆ ನಡೆಯುತ್ತಿದೆ. “ಮೃತ ಮಹಿಳೆ ಮತ್ತು ಆಸ್ವಸ್ಥಗೊಂಡವರು ‘ದೆಹಲಿ ಮೊಮೊಸ್’ ಹೆಸರಿನ ಫುಡ್ ಸ್ಟಾಲ್ ನಿಂದ ಮೊಮೊಸ್ ಸೇವಿಸಿದ್ದಾರೆ. ಚಿಂತಲ್ ಬಸ್ತಿಯಲ್ಲಿರುವ ಈ ಸ್ಟಾಲ್ ಅನ್ನು ಮೂರು ತಿಂಗಳ ಹಿಂದೆ ಬಿಹಾರದಿಂದ ಬಂದ ಆರು ಮಂದಿ ಸೇರಿ ಪ್ರಾರಂಭಿಸಿದ್ದರು. ಸ್ಟಾಲ್ ನಡೆಸುತ್ತಿದ್ದವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.


ಮೊಮೊಸ್ ತಿಂದ ಒಂದು ಗಂಟೆಯ ನಂತರ ಮಹಿಳೆ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.



Join Whatsapp