ಕರಾವಳಿ ಸೇರಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Prasthutha|

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -


ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡು ಚಿಕ್ಕಮಗಳೂರು, ಹಾಸನ ಮತ್ತು ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 03 ರವರೆಗೆ ಸಾಧಾರಣ ಮಳೆ, ನಂತರ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.


ಹಿಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ವಾತಾವರಣ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ ಇಳಿಕೆಯಾಗಿದ್ದು, ಬೆಳಗಿನ ಜಾವ 5 ಗಂಟೆಯಿಂದ ಚಳಿ ಶುರುವಾಗುತ್ತಿದ್ದು, ಬೆಳಗ್ಗೆ 10 ಗಂಟೆಯವರೆಗೂ ಚಳಿಯ ವಾತಾವರಣವಿದೆ.



Join Whatsapp