ಮುಡಾ ಮಾಜಿ ಆಯುಕ್ತ ನಟೇಶ್ ಇಡಿ ವಶಕ್ಕೆ..!

Prasthutha|

- Advertisement -

ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಮುಡಾ ಮಾಜಿ ಆಯುಕ್ತ ನಟೇಶ್ ಮನೆಯಲ್ಲಿ ನಡೆದ ಇಡಿ ದಾಳಿ ಇದೀಗ ಅಂತ್ಯವಾಗಿದೆ.

ಸದ್ಯ ನಟೇಶ್​ರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಮಲ್ಲೇಶ್ವರಂ ಮನೆಯಿಂದ ನಟೇಶ್​ಗೆ ಸೇರಿದ ಕಾರಲ್ಲೇ ಶಾಂತಿನಗರ ಇಡಿ ಕಚೇರಿಗೆ ಅಧಿಕಾರಿಗಳು ಕರೆತಂದಿದ್ದಾರೆ.

ನಗರದ ಮಲ್ಲೇಶ್ವರಂನ 10ನೇ ಕ್ರಾಸ್ ನಲ್ಲಿರುವ‌ ನಟೇಶ್ ಮನೆಗೆ ನಿನ್ನೆ ಬೆಳಗ್ಗೆ 8 ಗಂಟೆಗೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದರು. ರಾತ್ರಿ10 ಗಂಟೆಯವರೆಗೂ ದಾಖಲೆಗಳನ್ನು ಜಾಲಾಡಿದ್ದು, 4 ಬ್ಯಾಗ್ ಕೊಂಡೊಯ್ದಿದ್ದರು. ಇಂದು ಕೂಡ ತಲಾಶ್​ ಮಾಡಿದ್ದು, ಸತತ 33 ಗಂಟೆಗಳ ಕಾಲ ದಾಖಲೆ ಪರಿಶೀಲನೆ ಮುಗಿಸಿ ತೆರಳಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ಆಪ್ತ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಇಡಿ ವಿಚಾರಣೆ ಅಂತ್ಯವಾಗಿದೆ. ಮೈಸೂರಿನ ಹಿನಕಲ್​ನಲ್ಲಿರುವ ರಾಕೇಶ್ ಪಾಪಣ್ಣ ಮನೆ ಮೇಲೆ ನಿನ್ನೆ ಬೆಳಗ್ಗೆ 7 ಗಂಟೆಗೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಸತತ 35 ಗಂಟೆ ತನಿಖೆ, ವಿಚಾರಣೆ ನಡೆಸಿ ಇದೀಗ ನಿರ್ಗಮಿಸಿದ್ದಾರೆ.



Join Whatsapp