ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್‌: ವಿಜಯೇಂದ್ರ

Prasthutha|

ಹಾಸನ: ಕರ್ನಾಟಕ ಬಿಜೆಪಿ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎನ್ನುವ ಆರೋಪಗಳು ಇವೆ. ಇದೇ ಹೊಂದಾಣಿಕೆ ರಾಜಕಾರಣದಲ್ಲಿ ಬಗ್ಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಯಾರ್ಯಾರು ಅಡ್ಜಸ್ಟ್‌ ಮೆಂಟ್ ಪಾಲಿಟಿಕ್ಸ್ ಮಾಡುತ್ತಾರೆ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ನಮ್ಮ ಪಕ್ಷ ಶುದ್ದೀಕರಣ ಅಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ ಎಂದು ಹೇಳಿದ್ದಾರೆ.

- Advertisement -

ಸುದ್ದಿಗಾರರಿಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಾರ್ಯಾರು ಹೊಂದಾಣಿಕೆ ರಾಜಕೀಯ ಮಾಡುತ್ತಾರೆ ಅವರನ್ನ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ನಮ್ಮ ಪಕ್ಷ ಶುದ್ದೀಕರಣ ಅಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ. ಬರುವ ದಿನಗಳಲ್ಲಿ ಎಲ್ಲವೂ ಕೂಡ ಸರಿ ಹೋಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೋಳಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರ ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಿದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ಸಂಘಟನೆ ಕೆಲಸ ಇದೆ, ಉಪಚುನಾವಣೆ ಇದೆ. ಇವತ್ತು ವಕ್ಫ್ ವಿಚಾರವಾಗಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ. ಆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸ್ವಪಕ್ಷದ ವಿರೋಧಿಗಳಿಗೆ ಟಾಂಗ್ ಕೊಟ್ಟರು.



Join Whatsapp