ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ: ₹2 ಕೋಟಿಗೆ ಬೇಡಿಕೆ

Prasthutha|

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ.

- Advertisement -


ಮುಂಬೈ ಟ್ರಾಫಿಕ್ ಪೊಲೀಸರಿಗೆ ಮಂಗಳವಾರ, ₹2 ಕೋಟಿ ಹಣ ನೀಡದಿದ್ದರೆ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಅನಾಮಧೇಯ ವ್ಯಕ್ತಿಯಿಂದ ಸಂದೇಶ ಬಂದಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಈ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಇತ್ತೀಚೆಗೆ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೋದರನೆಂದು ಹೇಳಿಕೊಂಡು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಕರೆ ಮಾಡಿ, ₹10 ಕೋಟಿ ಹಣ ಕೇಳಿದ್ದ ವ್ಯಕ್ತಿಯನ್ನು ನೋಯ್ಡಾ ಮತ್ತು ಮುಂಬೈ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ನಿನ್ನೆ ಬಂಧಿಸಿದ್ದರು.




Join Whatsapp