ಸಚಿವ ಝಮೀರ್ ರನ್ನು ಸಂಪುಟದಿಂದ ಕಿತ್ತೊಗೆಯಿರಿ: ಪ್ರಲ್ಹಾದ್ ಜೋಶಿ ಆಗ್ರಹ

Prasthutha|

ಹುಬ್ಬಳ್ಳಿ: ರಾಜ್ಯದಲ್ಲಿ ಕೋಮು ದ್ವೇಷ ಹರಡುತ್ತಿರುವ, ಇಸ್ಲಾಮೀಕರಣ ಮಾಡಲು ಮುಂದಾಗಿರುವ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಸಂಪುಟದಿಂದ ಕಿತ್ತೊಗೆಯಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

- Advertisement -


ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಡೋಂಗಿ ಜಾತ್ಯತೀತತೆ ಮತ್ತು ಮುಸ್ಲಿಮರ ತುಷ್ಟೀಕರಣ ನೀತಿಯಿಂದಾಗಿ ದೇವಸ್ಥಾನಗಳ ಒಂದು ಇಂಚು ಜಾಗವೂ ಹೆಚ್ಚಾಗಿಲ್ಲ. ಆದರೆ, ಎಲ್ಲ ಪ್ರಮುಖ ಮತ್ತು ಹೆಚ್ಚು ಆದಾಯ ಇರುವ ದೇವಸ್ಥಾನಗಳನ್ನು ಸರ್ಕಾರ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ ಎಂದು ಆರೋಪಿಸಿದರು.


ಬಿಜೆಪಿ ಸರ್ಕಾರ ಇದ್ದಾಗಲೂ ರೈತರಿಗೆ ನೋಟಿಸ್ ನೀಡಲಾಗಿತ್ತು ಎಂದು ಕಾಂಗ್ರೆಸ್ನವರು ಹೇಳುತ್ತಿದ್ದಾರೆ.

- Advertisement -


ಆ ಸಮಯದಲ್ಲಿ ನೋಟಿಸ್ ಕೊಟ್ಟಿದ್ದರೂ ತಪ್ಪೆ. ಆಗ ಯಾರೂ ನಮ್ಮ ಗಮನಕ್ಕೆ ತಂದಿರಲಿಲ್ಲ. ನಮ್ಮ ಸರ್ಕಾರ ಇದ್ದುದರಿಂದ ವಕ್ಫ್ ಮಂಡಳಿಯವರು ಗೋಪ್ಯವಾಗಿ ನೋಟಿಸ್ ನೀಡಿದ್ದರು. ಆಗ ನಮ್ಮ ಗಮನಕ್ಕೆ ಬಂದಿದ್ದರೆ ಮಂಡಳಿಯವರಿಗೆ ಎಚ್ಚರಿಕೆ ನೀಡಿ, ನೋಟಿಸ್ ಹಿಂಪಡೆಯಲು ಹೇಳುತ್ತಿದ್ದೆವು. ಈಗ ರೈತರು ನಮ್ಮ ಗಮನಕ್ಕೆ ತಂದಿದ್ದರಿಂದ ಹೋರಾಟ ಮಾಡಲಾಗುತ್ತಿದೆ ಎಂದರು.
ವಕ್ಫ್ ಆಸ್ತಿ ವಿವಾದ ಈಗಲೂ ಬೆಳಕಿಗೆ ಬರುತ್ತಿರಲಿಲ್ಲ. ಕೆಲವು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಬಂದಿದ್ದರಿಂದ ಉಳಿದವರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿ ತಮ್ಮ ದಾಖಲೆಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ ಎಂದು ಹೇಳಿದರು.




Join Whatsapp