ಒಟ್ಟಾವಾ: ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿ ಸಂಚು ರೂಪಿಸುವಲ್ಲಿ ಭಾರತದ ಗೃಹ ಸಚಿವ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾ ಸರ್ಕಾರ ಮಂಗಳವಾರ ಆರೋಪಿಸಿದೆ.
ಈ ಕುರಿತು ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.
ಕೆನಡಾದ ವಿದೇಶಾಂಗ ವ್ಯವಹಾರಗಳ ಉಪಸಚಿವ ಡೇವಿಡ್ ಮಾರಿಸನ್, ‘ಪತ್ರಿಕೆಯವರು ಕರೆ ಮಾಡಿ ಸಿಖ್ ಪ್ರತ್ಯೇಕತಾವಾದಿಗಳ ವಿರುದ್ಧದ ಸಂಚಿನ ಹಿಂದೆ ಇರುವುದು ಅವರೇ (ಅಮಿತ್ ಶಾ)? ಎಂದು ಕೇಳಿದ್ದರು. ಅದಕ್ಕೆ ನಾನು ‘ಹೌದು’ ಎಂದು ಉತ್ತರಿಸಿರುವುದಾಗಿ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.
ಈ ಕುರಿತು ಒಟ್ಟಾವಾದಲ್ಲಿರುವ ಭಾರತದ ಹೈ ಕಮಿಷನ್ ಮತ್ತು ಭಾರತೀಯ ವಿದೇಶಾಂಗ ಸಚಿವಾಲಯವು ತಕ್ಷಣದ ಪ್ರತಿಕ್ರಿಯೆಯನ್ನು ನೀಡಿಲ್ಲ.