ಶಿಗ್ಗಾಂವಿ ಉಪಚುನಾವಣೆ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಖಾದ್ರಿ

Prasthutha|

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸೈಯದ್ ಅಜ್ಜಂಪೀರ್ ಖಾದ್ರಿ ಅವರು ಪಕ್ಷೇತರರಾಗಿ ಸಲ್ಲಿಸಿದ್ದ ನಾಮಪತ್ರವನ್ನು ಬುಧವಾರ ವಾಪಸು ಪಡೆದಿದ್ದಾರೆ.

- Advertisement -


ಬೆಂಗಳೂರಿನಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿಗೆ ಬಂದಿದ್ದ ಖಾದ್ರಿ, ಸಚಿವರಾದ ಝಮೀರ್ ಅಹ್ಮದ್ ಹಾಗೂ ಶಿವಾನಂದ ಪಾಟೀಲ ಜೊತೆಯಲ್ಲಿ ಬುಧವಾರ ಬೆಳಿಗ್ಗೆ ಚುನಾವಣಾಧಿಕಾರಿ ಕಚೇರಿಗೆ ಬಂದರು.


ಸಚಿವರು, ಶಾಸಕರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿಯೇ ಖಾದ್ರಿ ಅವರು ನಾಮಪತ್ರ ವಾಪಸು ಪಡೆದರು.

- Advertisement -


ನಾಮಪತ್ರ ವಾಪಸ್ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಖಾದ್ರಿ, ‘ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು ಜನಪರವಾಗಿವೆ. ಸಿದ್ದರಾಮಯ್ಯ ಅವರ ಶಿಷ್ಯ ನಾನು. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುವೆ’ ಎಂದರು.




Join Whatsapp