ಕಿವಿ ಹಣ್ಣು ಆರೋಗ್ಯಕರ ಹಣ್ಣುಗಳಲ್ಲಿ ಒಂದಾಗಿದೆ. ಇದು ಉತ್ತಮ ಆರೋಗ್ಯಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ.
ಕಿವಿಯನ್ನು ಹೃದಯರಕ್ತನಾಳದ ಕಾಯಿಲೆಗಳು, ಅಧಿಕ ರಕ್ತದೊತ್ತಡ ಮತ್ತು ಕಣ್ಣಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದು ವಿಟಮಿನ್ ಕೆ, ವಿಟಮಿನ್ ಸಿ, ವಿಟಮಿನ್ ಇ, ಪೊಟ್ಯಾಸಿಯಮ್ ಇತ್ಯಾದಿಗಳ ಉತ್ತಮ ಮೂಲವಾಗಿದೆ.
ಚರ್ಮಕ್ಕೆ ಒಳ್ಳೆಯದು: ವರದಿ ಪ್ರಕಾರ , ಕಿವಿ ಹಣ್ಣಿನ ಬಳಕೆ ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಕಿವಿಯಲ್ಲಿನ ಉರಿಯೂತ ನಿವಾರಕ ಗುಣಗಳು ಚರ್ಮದ ಮೇಲಿನ ದದ್ದುಗಳು, ಮೊಡವೆಗಳು ಮತ್ತು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಚರ್ಮವನ್ನು ಸ್ವಚ್ಛವಾಗಿರಿಸಲು ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ ಚರ್ಮವು ಆರೋಗ್ಯಕರವಾಗಿ ಕಾಣುತ್ತದೆ.
ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ: ಕಿವಿ ತಿನ್ನುವುದರಿಂದ ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ. ಇದು ಸ್ಟ್ರೋಕ್, ಮೂತ್ರಪಿಂಡ ಮತ್ತು ಹೃದಯಾಘಾತದ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುವ ಆಂಟಿಥ್ರಂಬೋಟಿಕ್ (ಹೆಪ್ಪುಗಟ್ಟುವಿಕೆ-ವಿರೋಧಿ) ಎಂಬ ಗುಣಲಕ್ಷಣಗಳನ್ನು ಹೊಂದಿದೆ.
ವಿಟಮಿನ್-ಸಿ ಮೂಲ: ಕಿವಿಯಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್-ಸಿ ಇದೆ. ಇದು ವಿಟಮಿನ್-ಸಿ, ಉತ್ಕರ್ಷಣ ನಿರೋಧಕಗಳ ಅತ್ಯುತ್ತಮ ಮೂಲವಾಗಿದೆ. ಇದು ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ನಿಮ್ಮ ಚರ್ಮವನ್ನು ಆರೋಗ್ಯಕರ ಮತ್ತು ಯೌವನದಿಂದ ಇಡುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಕಿವಿ ಹಣ್ಣು ತಿನ್ನೋದ್ರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.