ಈ ಬಾರಿ ಕುಮಾರಸ್ವಾಮಿ ನೋಟು, ಯೋಗೇಶ್ವರ್‌ ಗೆ ವೋಟು: ಕಾಂಗ್ರೆಸ್ ಅಭ್ಯರ್ಥಿ ಸಿಪಿವೈ

Prasthutha|

ರಾಮನಗರ: ಈ ಬಾರಿ ಕುಮಾರಸ್ವಾಮಿ ನೋಟು, ಯೋಗೇಶ್ವರ್‌ಗೆ ವೋಟು ಎಂದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ವ್ಯಂಗ್ಯವಾಡಿದ್ದಾರೆ.

- Advertisement -

ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಚನ್ನಪಟ್ಟಣ ಅಖಾಡದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.

ಪ್ರಚಾರ ವೇಳೆ ಮಾತನಾಡಿದ ಅವರು, ಈ ಬಾರಿ ಚನ್ನಪಟ್ಟಣ ಅಖಾಡದಲ್ಲಿ ಕುಮಾರಸ್ವಾಮಿಗೆ ನೋಟು ಬಂದರೆ ನನಗೆ ವೋಟು ಬರಲಿದೆ. ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕಾರಣ ಈ ಉಪಚುನಾವಣೆ ಬಂದಿದೆ. ಅನಿತಾ ಕುಮಾರಸ್ವಾಮಿ ಅವರು ಎರಡು ಸಲ ನನ್ನ ಮೇಲೆ ಸ್ಪರ್ಧೆ ಮಾಡಿದ್ದರು. ರಾಜನಿಗೆ ವಯಸ್ಸಾದ ಮೇಲೆ ಮಗನಿಗೆ ಪಟ್ಟಾಭಿಷೇಕ ಮಾಡುವ ಹಾಗೇ ಇದೀಗ ಮಗನನ್ನು ಚುನಾವಣೆಗೆ ನಿಲ್ಲಿಸಿದ್ದಾರೆ ಎಂದರು.




Join Whatsapp